2 ಕೊರಿಂಥದವರಿಗೆ 8:9 - ಕನ್ನಡ ಸಮಕಾಲಿಕ ಅನುವಾದ9 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ತೊ ಸಾವ್ಕಾರ್ ರ್‍ಹಾಲ್ಯಾರ್‍ಬಿ ತುಮ್ಚ್ಯಾಸಾಟ್ನಿ ತೊ ಗರಿಬ್ ಹೊಲೊ. ಕಶ್ಯಾಕ್ ಮಟ್ಲ್ಯಾರ್ ತೆಚ್ಯಾ ಗರಿಬ್ಕಿ ವೈನಾ ಅಮ್ಕಾ ಸಾವ್ಕಾರ್ ಕರುಚೆ ಮನ್ತಲೊ ತೆಚೊ ಮನ್, ಅಧ್ಯಾಯವನ್ನು ನೋಡಿ |