Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:14 - ಕನ್ನಡ ಸಮಕಾಲಿಕ ಅನುವಾದ

14 ನಿಮಗೆ ದೊರೆತ ಮಿತಿಯಿಲ್ಲದ ದೇವರ ಕೃಪೆಯ ನಿಮಿತ್ತ, ಅವರು ನಿಮ್ಮನ್ನು ಕಾಣುವ ಬಯಕೆಯಿಂದ ನಿಮಗಾಗಿ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆಮಾಡಿ ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿ ಇರುವದರಿಂದ ನಿಮ್ಮ ಪರಿಚಿತಿಮಾಡಬೇಕೆಂದು ಕೋರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದಲ್ಲದೆ ಆ ಜನರು ಪ್ರಾರ್ಥಿಸುವಾಗ ತಾವು ನಿಮ್ಮೊಂದಿಗೆ ಇರಬೇಕಾಗಿತ್ತೆಂದು ಆಶಿಸುವರು. ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿರುವುದೇ ಅದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಮನುನ್ ತುಮ್ಚ್ಯಾ ಪ್ರೆಮಾನ್ ಭರುನ್ ತುಮ್ಚ್ಯಾಸಾಟ್ನಿ ಮನಾನಿ ತಿ ಲೊಕಾ ಮಾಗ್ನಿ ಕರ್ತ್ಯಾತ್, ಅಸೆ ದೆವಾನ್ ತುಮ್ಚ್ಯಾ ವರ್‍ತಿ ಅಪ್ನಾಚಿ ಮಾಪುಕ್ ಹೊಯ್ನಾ ತಸ್ಲಿ ಆಶಿರ್ವಾದಾ ವೊತಿ ಸಾರ್ಕೆ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:14
18 ತಿಳಿವುಗಳ ಹೋಲಿಕೆ  

ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಪ್ರಿಯರೇ, ಮಕೆದೋನ್ಯದಲ್ಲಿರುವ ಸಭೆಗಳಿಗೆ ದೇವರು ಕೊಟ್ಟಿರುವ ಕೃಪೆಯನ್ನು ಕುರಿತು ನೀವು ತಿಳಿದಿರಬೇಕೆಂದು ನಮ್ಮ ಅಪೇಕ್ಷೆ.


ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.


ನೀವು ನಿಮ್ಮ ಪ್ರಾರ್ಥನೆಯಿಂದ ನಮಗೆ ಸಹಾಯಮಾಡಿರಿ. ಹೀಗೆ, ಬಹಳ ಜನರ ಪ್ರಾರ್ಥನೆಗಳಿಗೆ ಉತ್ತರವಾಗಿ ನಮಗೆ ದೊರಕಿದ ಕೃಪೆಯ ಮೆಚ್ಚುಗೆಗಾಗಿ, ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವರು.


ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.


ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತೋತ್ರವಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು