2 ಕೊರಿಂಥದವರಿಗೆ 9:5 - ಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಸಹೋದರರನ್ನು ಮುಂಚಿತವಾಗಿ ಹೋಗುವುದಕ್ಕೆ ನಾನು ಏರ್ಪಾಡು ಮಾಡಬೇಕಾಯಿತು. ಅವರು ಬಂದು ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಕಾರ್ಯವನ್ನು ಮುಗಿಸುವರು. ಹೀಗೆ ಈ ಉದಾರವಾಗಿರುವ ದಾನವು ಬಲಾತ್ಕಾರದ ವಸೂಲಿಯಾಗಿರದೆ ಮನಃಪೂರ್ವಕವಾಗಿ ಕೊಟ್ಟಿರುವ ಸಹಾಯ ಧನವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗಿರಲಾಗಿ ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಕೊಡುತ್ತೇವೆಂದು ನೀವು ಮೊದಲು ಹೇಳಿದ ಧರ್ಮದ್ರವ್ಯವನ್ನು ಸಿದ್ಧಪಡಿಸಬೇಕೆಂಬದಾಗಿ ಇವರನ್ನು ಬೇಡಿಕೊಳ್ಳುವದು ಅವಶ್ಯವೆಂದು ನನಗೆ ತೋಚಿತು. ಹೀಗೆ ಆ ಹಣವು ಸುಲಿಗೆಯಂತೆ ಬಾರದೆ ಧರ್ಮಾರ್ಥವಾಗಿಯೇ ಸಿದ್ಧವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನಾನು ಬರುವುದಕ್ಕಿಂತ ಮೊದಲು ನಿಮ್ಮ ಬಳಿಗೆ ಹೋಗುವಂತೆ ಈ ಸಹೋದರರನ್ನು ಕೇಳಿಕೊಳ್ಳಬೇಕೆಂದು ನಾನು ಆಲೋಚಿಸಿದೆನು. ನೀವು ವಾಗ್ದಾನ ಮಾಡಿದ ಸಹಾಯಧನವನ್ನು ಇವರು ಸಂಗ್ರಹಿಸುವರು. ಆಗ, ನಾವು ಬರುವಷ್ಟರಲ್ಲಿ ನಿಮ್ಮ ಸಹಾಯಧನವು ಸಿದ್ಧವಾಗಿರುವುದು. ಈ ಸಹಾಯಧನವು ನಿಮ್ಮ ಹೃತ್ಪೂರ್ವಕವಾದ ದಾನವೇ ಹೊರತು ಸಂಕಟದಿಂದ ಕೊಟ್ಟ ದಾನವಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಸೆಮನುನ್ ತುಮಿ ಸಾಂಗಲ್ಲೆ ದಾನ್ ಗೊಳಾ ಕರುಕ್, ಭಾವಾ ಭೆನಿಯಾನು ಜಬರ್ದಸ್ತಿ ಕರ್‍ತಲೆ ಬರೆ ಮನುನ್ ಮಾಕಾ ದಿಸ್ಲೆ. ಹೆಚ್ಯಾ ವೈನಾ ಜೆ ಕಾಯ್ ಗೊಳಾ ಕರ್ಲ್ಯಾಶಿ, ತೆ ಧಾರಾಳ್ ಮನಾಚೆ ದಾನ್ ಹೊತಾ, ತೆ ತುಮ್ಚ್ಯಾಕ್ನಾ ಜಬರ್ದಸ್ತಿನ್ ಕಾಡುನ್ ಘೆಟಲ್ಲೆ ಹೊಯ್ನಾ. ಅಧ್ಯಾಯವನ್ನು ನೋಡಿ |