Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:18 - ಕನ್ನಡ ಸಮಕಾಲಿಕ ಅನುವಾದ

18 ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತ್ಯಾ ದಿಸಿ ಧನಿ ತೆಚ್ಯಾ ವರ್‍ತಿ ದಯಾ ದಾಕ್ವುಂದಿ! ಅನಿ ಎಫೆಜಾತ್ ಮಾಜೆಸಾಟಿ ತೆನಿ ಕವ್ಡೆ ಬರೆ ಕಾಮ್ ಕರಲ್ಲ್ಯಾನ್ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:18
26 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ.


ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ


“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:


ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು.


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು.


ದೇವಜನರಿಗೆ ಸಹಾಯ ಮಾಡುವುದನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯವಿಲ್ಲ.


ಆದರೆ ಐವತ್ತು ದಿನಗಳ ಹಬ್ಬದ ತನಕ ಎಫೆಸದಲ್ಲಿರುವೆನು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು,


ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.


ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


“ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.


ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.


ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.


ಆದರೆ ಅವನು ರೋಮಿನಲ್ಲಿದ್ದಾಗ ಪ್ರಯಾಸದಿಂದ ನನ್ನನ್ನು ಹುಡುಕಿ ಕಂಡುಕೊಂಡನು.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು