2 ತಿಮೊಥೆಯನಿಗೆ 1:3 - ಕನ್ನಡ ಸಮಕಾಲಿಕ ಅನುವಾದ3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಿಯಾ ಅಮ್ಚ್ಯಾ ವಾಡ್ವಡ್ಲಾನಿ ಕರಲ್ಲ್ಯಾ ಸರ್ಕೆ ಪವಿತ್ರ್ ಮನಾನಿ ಸೆವಾ ಕರ್‍ತಲ್ಯಾ ದೆವಾಕ್ ಧನ್ಯವಾದ್ ದಿತಾ. ದಿಸ್-ರಾತ್ ಮಾಜ್ಯಾ ಮಾಗ್ನಿತ್ ಮಿಯಾ ತುಕಾ ತಿಮೊತಿ ಯಾದ್ ಕರ್‍ತಾ. ಅಧ್ಯಾಯವನ್ನು ನೋಡಿ |