Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:4 - ಕನ್ನಡ ಸಮಕಾಲಿಕ ಅನುವಾದ

4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನ ಕಣ್ಣೀರುಗಳನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಿಯಾ ತನ್ನಾ ಜಾತಾನಾ ಡೊಳ್ಯಾನಿ ಕಾಡಲ್ಲ್ಯಾ ದುಕ್ಕಾಂಚಿ ಮಾಕಾ ಯಾದ್ ಹಾಯ್ ಅನಿ ಹೊತಾ ತವ್ಡೆ ಲಗ್ಗು ತುಕಾ ಬಗುಚೆ ಮನ್ತಲಿ ಮಾಜಿ ಆಶಾ. ತನ್ನಾಚ್ ಮಾಜ್ಯಾ ಜಿವಾಕ್ ಸಮಾದಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:4
19 ತಿಳಿವುಗಳ ಹೋಲಿಕೆ  

ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು.


ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.


ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.


ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.


ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು