Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:6 - ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆಚೆಸಾಟ್ನಿ ಮಿಯಾ ತುಜ್ಯಾ ಟಕ್ಲ್ಯಾ ವರ್‍ತಿ ಹಾತಾ ಥವಲ್ಲ್ಯಾ ತನ್ನಾ ದೆವಾನ್ ತುಕಾ ದಿಲ್ಲೆ ವರು, ದಿವೊ ಸರ್ಕೆ ಪೆಟುನ್ಗೆತ್ ರ್‍ಹಾಂವ್ದಿತ್. ತೆ ತುಕಾ ಗಾವಲ್ಲೆ ಮಿಯಾ ತುಜಾ ವೈರ್ ಹಾತ್ ಥವಲ್ಲೆ ತನ್ನಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:6
19 ತಿಳಿವುಗಳ ಹೋಲಿಕೆ  

ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?


ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.


ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.


ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.


ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು.


ಕುಶಲತೆ ಬಲ್ಲ ಎಲ್ಲಾ ಸ್ತ್ರೀಯರು ಮೇಕೆ ಕೂದಲುಗಳನ್ನು ನೇಯ್ದರು.


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.


ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.


ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತನೆಂದು ತೋರಿಸು.


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.


ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು