Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:14 - ಕನ್ನಡ ಸಮಕಾಲಿಕ ಅನುವಾದ

14 ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಜ್ಯಾ ಲೊಕಾಕ್ನಿ ಹ್ಯಾ ಗೊಸ್ಟಿಯಾ ಪರ್ತುನ್ ಪರ್ತುನ್ ಯಾದ್ ಕರುನ್ಗೆತ್ ರ್‍ಹಾ. ಗೊಸ್ಟಿಯಾಕ್ನಿ ಲಾಗುನ್ ತೆನಿ ಕಸ್ಲೊಬಿ ವಾದ್ ಧರುನ್ ಘೆವ್ನ್ ರ್‍ಹಾವ್ಚೆ ನ್ಹಯ್ ಮನುನ್ ದೆವಾಚ್ಯಾ ನಾವಾನ್ ತೆಂಕಾ ಬುದ್ ಸಾಂಗ್, ಅಸ್ಲ್ಯಾ ಬುರ್ಶ್ಯಾ ಗೊಸ್ಟಿಯಾ ಆಯಿಕ್ತಲ್ಯಾಂಚ್ಯಾ ಫಾಯ್ದಾಕ್ ಪಡ್ತಲೆ ಸೊಡುನ್ ತೆಂಚ್ಯಾ ನಾಸಾಕ್ ಕಾರನ್ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:14
30 ತಿಳಿವುಗಳ ಹೋಲಿಕೆ  

ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.


ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:


ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.


ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.


ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.


‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.


ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.


ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು