Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:15 - ಕನ್ನಡ ಸಮಕಾಲಿಕ ಅನುವಾದ

15 ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ದೇವರ ದೃಷ್ಟಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿಯಾ ದೆವಾಚ್ಯಾ ನದ್ರೆತ್ ಯೊಗ್ಯ್ ಮನುನ್ ದಾಕ್ವುನ್‍ ದಿ ಸರ್ಕೆ ಚಲುಕ್ ಖಟ್ಪಟ್ ಕರ್. ಅಪ್ನಾಚೆ ಕಾಮ್ ಕರುಕ್ ಲಜಿನಸಲ್ಲ್ಯಾ ಕಾಮ್ಗಾರ್‍ಯಾ ಸರ್ಕೊ ತಿಯಾ ಹೊ ಅನಿ ಖರ್ಯಪಾನಾಚಿ ಖಬರ್ ಸಗ್ಳ್ಯಾಕ್ನಿ ಸಾಂಗ್ತಲ್ಯಾತ್ ಫಾಟಿ ಫಿಡೆ ಬಗುನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:15
29 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.


ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.


ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.


ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.


ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?


ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು