Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೆ ದೂರವಾಗಿರು; ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಬುರ್ಶ್ಯಾ ಪಿಶೆಪಾನಾಚ್ಯಾ ಗೊಸ್ಟಿಯಾನಿಕ್ನಾ ಧುರ್ ರ್‍ಹಾ. ತಸ್ಲ್ಯಾ ಬೊಲ್ನ್ಯಾತ್ನಿ, ಅನಿ ವಿಶಯಾತ್ನಿ ಮಿಳಲ್ಲ್ಯಾಂಚ್ಯಾ ಭುತ್ತುರ್ ದೆವಾಚೆ ಭಿಂಯೆ ಪುರಾ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:16
19 ತಿಳಿವುಗಳ ಹೋಲಿಕೆ  

ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು.


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ.


ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.


ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,


ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು