Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:20 - ಕನ್ನಡ ಸಮಕಾಲಿಕ ಅನುವಾದ

20 ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಇವುಗಳಲ್ಲಿ ಕೆಲವು ಉತ್ತಮ ಬಳಕೆಗೂ ಇನ್ನೂ ಕೆಲವು ಸಾಮಾನ್ಯ ಬಳಕೆಗೂ ಬರುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಅವುಗಳಲ್ಲಿ ಕೆಲವು ಉತ್ತಮವಾದ ಬಳಕೆಗೂ ಕೆಲವು ಹೀನವಾದ ಬಳಕೆಗೂ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಎಕ್ ಮೊಟ್ಯಾ ಘರಾತ್ ಚಾಂದಿಚಿ ಅನಿ ಸೊನ್ಯಾಚಿ ಎವ್ಡಿಚ್ ನ್ಹಯ್, ನಾಕ್ಡಾಚಿ ನಾಹೊಲ್ಯಾರ್ ಮಾಟಿಚಿ ಆಯ್ದಾನಾಬಿ ರ್‍ಹಾತ್ಯಾತ್, ತ್ಯಾತುರ್‍ಲಿ ಉಲ್ಲಿ ಬರ್‍ಯಾ ಉಪಯೊಗಾಕ್ ಅನಿಉಲ್ಲಿ ಕಿಳ್ ಕಾಮಾಂಚ್ಯಾ ಉಪಯೊಗಾಕ್ ವಾಪರ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:20
15 ತಿಳಿವುಗಳ ಹೋಲಿಕೆ  

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!


ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು.


ನೀವೂ ಸಹ ಆತ್ಮನ ಮೂಲಕ ಕ್ರಿಸ್ತನಲ್ಲಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ನಿರ್ಮಿತರಾಗುತ್ತಿದ್ದೀರಿ.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.


ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.


ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.


ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು