Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:21 - ಕನ್ನಡ ಸಮಕಾಲಿಕ ಅನುವಾದ

21 ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾಸಾಟ್ನಿ ಜೊ ಕೊನ್‍ ಅಪ್ನಾಚಿ ಬುರ್ಶಿ ಕಾಮಾ ಸೊಡುನ್ ಅಪ್ನಾಕುಚ್ ಪವಿತ್ರ್ ಕರ್‍ತಾ, ತೊ ಬರ್‍ಯಾ ವಿಶೆಸ್ ಕಾಮಾತ್ನಿ ಉಪಯೊಗಾಕ್ ಪಡ್ತಲೆ ಆಯ್ದಾನ್ ಹೊತಾ. ಕಶ್ಯಾಕ್ ಮಟ್ಲ್ಯಾರ್, ತೊ ಧನಿಯಾಕ್ ಒಪ್ಸುನ್ ದಿಲ್ಲೊ ಹೊತಾ. ಹರಿಎಕ್ ಮೊಟ್ಯಾ ಮೊಟ್ಯಾ ಬರ್‍ಯಾ ಕಾಮಾಕ್ನಿ ಉಪಯೊಗಾಕ್ನಿ ಪಡ್ತಲೆ ಆಯ್ದಾನ್ ತೊ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:21
21 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.


ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ.


ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.


ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.


ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.


ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.


ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು