Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:23 - ಕನ್ನಡ ಸಮಕಾಲಿಕ ಅನುವಾದ

23 ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮೂರ್ಖ ಹಾಗೂ ಅನರ್ಥ ವಾಗ್ವಾದಗಳು ಜಗಳಕ್ಕೆ ಕಾರಣಗಳು. ಅವುಗಳ ಗೊಡವೆ ನಿನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಪಿಶೆಪಾನಾಚ್ಯಾ ಅನಿ ಅರ್ಥ್ ನಸಲ್ಲ್ಯಾ ಗೊಸ್ಟಿಯಾನಿತ್ನಾ ಚುಕ್ವುನ್ ಘೆವ್ನ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ತ್ಯಾ ಗೊಸ್ಟಿಯಾ ಫಕತ್ ಝಗ್ಡ್ಯಾಂಚ್ಯಾ ವಾಂಗ್ಡಾಚ್ ಮುಗಸ್ತ್ಯಾತ್ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:23
7 ತಿಳಿವುಗಳ ಹೋಲಿಕೆ  

ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು