Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕ್ರಿಸ್ತ ಯೇಸುವಿನ ಒಳ್ಳೇ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನನುಭವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮಗಿರುವ ತೊಂದರೆಗಳಲ್ಲಿ ನೀನೂ ಪಾಲುಗಾರನಾಗು. ಕ್ರಿಸ್ತ ಯೇಸುವಿನ ನಿಜವಾದ ಸೈನಿಕನಂತೆ ಆ ತೊಂದರೆಗಳನ್ನು ಸ್ವೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜು ಕ್ರಿಸ್ತಾಚ್ಯಾ ಎಕ್ ವಿಸ್ವಾಸಿ ಸೈನಿಕಾಚ್ಯಾ ಸಾರ್ಕೆ ಮಾಜ್ಯಾ ವಾಂಗ್ಡಾ ಕಸ್ಟ್ ಅನಿ ತರಾಸ್ ಸೊಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:3
20 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಆದರೆ ನೀವು ಬೆಳಕನ್ನು ಹೊಂದಿದ ಮೇಲೆ ಬಾಧೆಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪುಮಾಡಿಕೊಳ್ಳಿರಿ.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.


ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು.


ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.


ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಸಹೋದರಿ ಅಪ್ಫಿಯಳಿಗೂ ನಮ್ಮ ಸಹ ಸೈನಿಕನಾದ ಅರ್ಖಿಪ್ಪನಿಗೂ ನಿಮ್ಮ ಮನೆಯಲ್ಲಿ ಸೇರುವ ಸಭೆಯವರಿಗೂ ಬರೆಯುವುದೇನೆಂದರೆ:


ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:


ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು