Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:4 - ಕನ್ನಡ ಸಮಕಾಲಿಕ ಅನುವಾದ

4 ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸೈನಿಕಾಂಚ್ಯಾ ತಾಂಡ್ಯಾತ್ ಭರ್‍ತಿ ಹೊಲ್ಲೊ ಸೈನಿಕ್ ಹ್ಯಾ ಜಗಾಚ್ಯಾ ರಾಟಾವಳಿತ್ನಿ ಗುಸ್ಮಟಿನಾ, ಅಪ್ನಾಕ್ ಸೈನಿಕಾತ್ನಿ ಭರ್‍ತಿ ಕರುನ್ ಘೆಟಲ್ಲ್ಯಾ ಅದಿಕಾರ್‍ಯಾಕ್ ಖುಶಿ ಕರುಚಿ ಮಂತಲಿ ತೆಚಿ ಆಶಾ ರ್‍ಹಾತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:4
11 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.


ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು