Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:7 - ಕನ್ನಡ ಸಮಕಾಲಿಕ ಅನುವಾದ

7 ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಹೇಳುವದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಿಯಾ ಸಾಂಗ್ತಾ ತ್ಯಾ ಬರ್‍ಯಾ ಗೊಸ್ಟಿಯಾ ಬರೆ ಕರುನ್ ಅರ್ಥ್ ಕರುನ್ ಘೆ, ಹೆ ಕಳ್ವುನ್ ಘೆವ್ಕ್ ಅಮ್ಚೊ ಧನಿಚ್ ತುಕಾ ಆದಾರ್ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:7
40 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.


ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,


ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.


ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; ನಾನು ಕಂಡದ್ದರಿಂದ ಪಾಠ ಕಲಿತೆನು.


ನಾನು ನಿಮ್ಮ ಸೇವಕನು, ನಿಮ್ಮ ಶಾಸನಗಳನ್ನು ನಾನು ಅರ್ಥಮಾಡಿಕೊಳ್ಳುವಂತೆ ನನಗೆ ವಿವೇಚನೆಯನ್ನು ಕೊಡಿರಿ.


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


ನಿಮ್ಮ ಶಾಸನಗಳು ಯಾವಾಗಲೂ ನೀತಿಯುಕ್ತವಾಗಿವೆ; ನಾನು ಬದುಕುವಂತೆ ನನಗೆ ವಿವೇಕವನ್ನು ಕೊಡಿರಿ.


ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.


ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.


ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.


“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.


ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು.


ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು