Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:8 - ಕನ್ನಡ ಸಮಕಾಲಿಕ ಅನುವಾದ

8 ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ; ಇದೇ ನಾನು ಸಾರುವ ಸುವಾರ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮರಲ್ಲ್ಯಾನಿತ್ನಾ ಝಿತ್ತೊ ಹೊಲ್ಲೊ ಜೆಜು ಕ್ರಿಸ್ತ್ ದಾವಿದಾಚ್ಯಾ ಘರಾನ್ಯಾಚೊ ಮನುನ್ ಯಾದ್ ಕರ್, ಹಿಚ್ ಮಿಯಾ ಸಾಂಗುಕ್ ಲಾಗಲ್ಲಿ ಬರಿ ಖಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:8
18 ತಿಳಿವುಗಳ ಹೋಲಿಕೆ  

ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.


ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


“ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.


ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.


ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು