Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:11 - ಕನ್ನಡ ಸಮಕಾಲಿಕ ಅನುವಾದ

11 ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾಜೆ ವರ್‍ತಿ ಯೆಲ್ಲಿ ಸಂಕಟಾ, ಅನಿ ಕಸ್ಟಾ ತುಕಾ ಗೊತ್ತ್ ಹಾತ್. ಅಂತಿಯೊಕಾತ್, ಇಕೊನಿಯಾತ್, ಅನಿ ಲಿಸ್ತ್ರಾತ್ ಮಾಕಾ ಕಸ್ಲೊ ಕಸ್ಟ್ ಸೊಸ್ತಲೊ ಪಡ್ಲೊ ಕಾಯ್-ಕಾಯ್ ಹೊಲೆ ಮನ್ತಲೆ ಸಗ್ಳೆ ತುಕಾ ಗೊತ್ತ್ ಹಾಯ್. ಖರೆ ಧನಿಯಾನ್ ತ್ಯಾ ಸಗ್ಳ್ಯಾ ತರಾಸಾನಿತ್ನಾ ಮಾಕಾ ರಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:11
43 ತಿಳಿವುಗಳ ಹೋಲಿಕೆ  

ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು.


ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.


ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು, ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ. ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ ಬಿಡಿಸಿದವರೂ ಅವರೇ!”


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು.


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.


ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.


ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.


ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.


ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು