Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:4 - ಕನ್ನಡ ಸಮಕಾಲಿಕ ಅನುವಾದ

4 ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಘಾತ್ಕಿ, ದುಡಕ್ತಲಿ, ಗರುಕಿನ್ ಫುಗಲ್ಲಿ, ದೆವಾಕ್ ಸೊಡುನ್ ಅಪ್ನಾಚ್ಯಾ ಮನಾಕ್‍ ಯೆತಾ ತೆಚೊ ಪ್ರೆಮ್ ಕರ್‍ತಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:4
12 ತಿಳಿವುಗಳ ಹೋಲಿಕೆ  

ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.


ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು