2 ತಿಮೊಥೆಯನಿಗೆ 4:1 - ಕನ್ನಡ ಸಮಕಾಲಿಕ ಅನುವಾದ1 ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದೆವಾಚ್ಯಾ ಅನಿ ಕ್ರಿಸ್ತ್ ಜೆಜುಚ್ಯಾ ಇದ್ರಾಕ್ ತೊ ಝಿತ್ತ್ಯಾಂಚಿ ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ರಾಜಾ ಹೊವ್ನ್ ರಾಜ್ ಚಾಲ್ವುಕ್ ಯೆತಾ. ಮಿಯಾ ತುಕಾ ಗಂಬಿರ್ ರಿತಿನ್ ಹುಕುಮ್ ದಿತಾ. ಅಧ್ಯಾಯವನ್ನು ನೋಡಿ |