Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:2 - ಕನ್ನಡ ಸಮಕಾಲಿಕ ಅನುವಾದ

2 ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚಿ ಬರಿ ಖಬರ್ ಸಾಂಗುನ್ಗೆತ್ ರ್‍ಹಾ, ಅನ್ಕುಲ್ ರ್‍ಹಾಲ್ಯಾರ್‍ಬಿ ನಸ್ಲ್ಯಾರ್‍ಬಿ ಸಗ್ಳ್ಯಾ ಎಳಾರ್ ತ್ಯಾತುರ್ ತಿಯಾ ಮಗ್ನ್ ಹೊವ್ನ್ ರ್‍ಹಾ, ಸಗ್ಳೆ ಸಂಬಾಳುನ್ ಘೆವ್ನ್ ತೆಂಕಾ ಜೊರ್ ಕರುನ್, ಚುಕ್ ಹೊತ್ತೆ ಸಮಾ ಕರುನ್, ಧೈರೊ ದಿವ್ನ್ ಉಲ್ಲಿ ಉಮ್ಮೆದ್ ಭರುನ್ ಸಗ್ಳೆ ಸಂಬಾಳುನ್ ಘೆವ್ನ್ ಶಿಕ್ವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:2
36 ತಿಳಿವುಗಳ ಹೋಲಿಕೆ  

ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಈ ಸಾಕ್ಷಿಯು ನಿಜವೇ. ಇದರ ದೆಸೆಯಿಂದ ಅವರು ನಂಬಿಕೆಯಲ್ಲಿ ಸ್ವಸ್ಥರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.


ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.


ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,


ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.


ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.


ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.


ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.


ಅವರು ಯೇಸುವಿನ ಬಳಿಗೆ ಬಂದು ಅವರಿಗೆ, “ನೀವು ಇದನ್ನು ಮಾಡುವುದಕ್ಕೆ ಅವನು ಯೋಗ್ಯನು,


ಪ್ರವಾದನೆಗಳನ್ನು ಹೀನೈಸಬೇಡಿರಿ.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು; ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು ನೀವೇ ತಿಳಿದಿದ್ದೀರಿ.


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.


ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.


ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು