Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಲೊಕಾ ಖರೆ ಶಿಕಾಪ್ ಆಯಿಕ್ತಲೆ ಸೊಡುನ್ ದಿತಲೊ ಎಳ್ ಯೆತಾ, ತೆನಿ ಅಪ್ನಾಚ್ಯಾ ಬುರ್ಶ್ಯಾ ಯವ್ಜನ್ಯಾಂಚ್ಯಾ ಸರ್ಕೆ ಅಪ್ನಾಕ್ ಆಯ್ಕುಕ್ ಬರೆ ದಿಸ್ತಲೆ ಶಿಕ್ವುತಲ್ಯಾ ಸುಮಾರ್ ಲೊಕಾಕ್ನಿ ತೆನಿ ಶಿಕ್ವುಕ್ ಮನುನ್ ಥವ್ನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:3
33 ತಿಳಿವುಗಳ ಹೋಲಿಕೆ  

ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


ಆದರೆ ನಾನು ಸತ್ಯವನ್ನು ಹೇಳುವವನಾದ್ದರಿಂದ ನೀವು ನನ್ನನ್ನು ನಂಬುವುದಿಲ್ಲ.


ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.


ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.


ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.


‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.


ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.


ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.


“ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು