Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:1 - ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾ- ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಯೆತಲ್ಯಾ ವಿಶಯಾತ್ ಅನಿ ಅಮಿ ತೆಚ್ಯಾ ಭೊತ್ಯಾನಿ ಗೊಳಾ ಹೊತಲ್ಯಾ ವಿಶಯಾತ್ ಅಮ್ಕಾ ತುಮ್ಚ್ಯಾಕ್ಡೆ ಬೊಲ್ತಲೆ ಹಾಯ್. ಹೆಚ್ಯಾ ವಿಶಯಾತ್ ಅಮಿ ತುಮ್ಚ್ಯಾ ಕಡೆ ಅಶೆ ಮಾಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:1
14 ತಿಳಿವುಗಳ ಹೋಲಿಕೆ  

ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು.


ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು