Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:11 - ಕನ್ನಡ ಸಮಕಾಲಿಕ ಅನುವಾದ

11 ಇದೇ ಕಾರಣದಿಂದ ದೇವರು ಅವರ ಮೇಲೆ ವಂಚಿಸಲು ಶಕ್ತಿಯುಳ್ಳ ಭ್ರಮೆಯನ್ನು ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದೇ ಕಾರಣದಿಂದ ದೇವರು ಅಸತ್ಯನಡಿಸುವ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಆ ಸುಳ್ಳನ್ನು ನಂಬುವದಕ್ಕೆ ಅವರನ್ನು ಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಆ ಜನರು ಸತ್ಯವನ್ನು ಪ್ರೀತಿಸಲಿಲ್ಲ. ಆದಕಾರಣ, ಸತ್ಯವನ್ನು ತೊರೆದು, ಸತ್ಯವಲ್ಲದ್ದನ್ನು ನಂಬುವಂತೆ ಮಾಡುವ ಶಕ್ತಿಯೊಂದನ್ನು ದೇವರು ಅವರ ಬಳಿಗೆ ಕಳುಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆಚೆಸಾಟ್ನಿ, ಝುಟೆ ಹೊತ್ತೆ ಖರೆ ಮನುನ್ ದಿಸಿ ಸರ್ಕೆ ಹೊಯ್ ಸರ್ಕಿ ಎಕ್ ಮೊಟಿ ತಾಕತ್ ದೆವ್ ತೆಂಚ್ಯಾ ವರ್‍ತಿ ಧಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:11
21 ತಿಳಿವುಗಳ ಹೋಲಿಕೆ  

ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.


ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಅವನು ಶಾಪಕೊಡಲು ಇಷ್ಟಪಟ್ಟನು; ಅದೇ ಅವನಿಗೆ ಬರಲಿ; ಅವನು ಆಶೀರ್ವಾದವನ್ನು ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.


“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.”


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.


“ನಿನ್ನ ಸೇವಕನು ನನಗೆ ಹೀಗೆ ಮಾಡಿದ,” ಎಂದು ತನ್ನ ಹೆಂಡತಿ ಹೇಳಿದ್ದನ್ನು ಯಜಮಾನನು ಕೇಳಿ, ಅವನ ಕೋಪವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು