Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:13 - ಕನ್ನಡ ಸಮಕಾಲಿಕ ಅನುವಾದ

13 ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವದಕ್ಕೆ ಬದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:13
42 ತಿಳಿವುಗಳ ಹೋಲಿಕೆ  

ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.


ದೇವರು ಪ್ರೀತಿಸುವ ಪ್ರಿಯರೇ, ದೇವರು ತಾವಾಗಿಯೇ ನಿಮ್ಮನ್ನು ಆರಿಸಿಕೊಂಡಿದ್ದಾರೆಂದು ನಾವು ಬಲ್ಲೆವು.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: “ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.”


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.


ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?


ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.


ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.


ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು.


ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.


ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.


ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.


ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.


ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು