Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:15 - ಕನ್ನಡ ಸಮಕಾಲಿಕ ಅನುವಾದ

15 ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್‍ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ ಪತ್ರಿಕೆಯಿಂದಾಗಲಿ ನಿಮಗೆ ತಿಳಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಚೆಸಾಟ್ನಿ ಮಾಜ್ಯಾ ಭಾವಾ-ಭೆನಿಯಾನು, ತುಮಿ ಘಟ್ ರ್‍ಹಾವಾ ಅನಿ ಅಮಿ ಲಿವಲ್ಲ್ಯಾ ಚಿಟಿಯಾ, ನಾ ಹೊಲ್ಯಾರ್ ಸಾಂಗಲ್ಲ್ಯಾ ಗೊಸ್ಟಿಯಾಂಚ್ಯಾ ವೈನಾ ತುಮ್ಕಾ ಗಾವಲ್ಲಿ ಶಿಕಾಪಾ ಯಾದ್ ಥವ್ನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:15
10 ತಿಳಿವುಗಳ ಹೋಲಿಕೆ  

ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.


ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು