Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:16 - ಕನ್ನಡ ಸಮಕಾಲಿಕ ಅನುವಾದ

16 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16-17 ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಮ್ಚೊ ಧನಿ ಜೆಜು ಕ್ರಿಸ್ತ್, ಅನಿ ಅಮ್ಚೊ ದೆವ್ ಬಾಬಾ, ಅಮ್ಚೊ ಪ್ರೆಮ್ ಕರ್‍ತಲೊ ಅನಿ ಅಪ್ನಾಚ್ಯಾ ಕುರ್ಪೆನ್ ಮೊಟೊ ಧೈರೊ ಅನಿ ಎಕ್ ಘಟ್ಟ್ ಬರೊಸೊ ದಿಲ್ಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:16
46 ತಿಳಿವುಗಳ ಹೋಲಿಕೆ  

ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ನಮ್ಮ ತಂದೆಯಾದ ದೇವರೂ ನಮಗೆ ಕರ್ತ ಆಗಿರುವ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ಮಾರ್ಗವನ್ನು ಸುಗಮಗೊಳಿಸಲಿ.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ.


ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.


ಆದರೆ ನಾವು ರಕ್ಷಣೆ ಹೊಂದಿದ್ದು ನಮ್ಮ ಕರ್ತ ಯೇಸುವಿನ ಕೃಪೆಯಿಂದಲೇ, ಹಾಗೆಯೇ ಅವರೂ ಹೊಂದುವರು ಎಂಬುದು ನಮ್ಮ ನಂಬಿಕೆ,” ಎಂದನು.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.


“ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು