Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:3 - ಕನ್ನಡ ಸಮಕಾಲಿಕ ಅನುವಾದ

3 ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕೊನ್‍ಬಿ ಖಲ್ಯಾ ವಾಟೆನ್‍ಬಿ ತುಮ್ಕಾ ಪಸ್ವುಚೆ ನ್ಹಯ್, ತಸೆ ತುಮಿ ಉಶಾರ್ಕಿನ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್ ನರ್ಕಾಕ್ ಸಮಂದ್ ಪಡಲ್ಲೊ ದುಸ್ಟ್ ಅನಿ ಬುರ್ಸೊ ವಿರೊದಿ ದಿಸ್ಲ್ಯಾ ಸಿವಾಯ್ ತೊ ನಾಸಾಚೊ ದಿಸ್ ಯೆಯ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:3
17 ತಿಳಿವುಗಳ ಹೋಲಿಕೆ  

ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.


ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಹಿಂದೆ ಇದ್ದು ಈಗ ಇಲ್ಲದ ಆ ಮೃಗವು ಎಂಟನೆಯವನು. ಅವನು ಆ ಏಳು ಜನರಲ್ಲಿ ಸೇರಿದವನಾಗಿದ್ದು, ವಿನಾಶಕ್ಕೆ ಹೋಗುತ್ತಿದ್ದಾನೆ.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು