Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಶಿಸ್ತಿನಿಂದ ನಡೆಯುತ್ತಾರೆಂದು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಗಲಾದರೋ ನಿಮ್ಮಲ್ಲಿ ಕೆಲವರು ದುಡಿಯದೆ ಮೈಗಳ್ಳರಾಗಿ ಅಲ್ಲಲ್ಲಿ ಅಲೆದಾಡುತ್ತಾ ಹರಟೆಮಲ್ಲರಾಗಿದ್ದಾರೆಂದು ನಮಗೆ ತಿಳಿದುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆ ಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ವರ್ತಮಾನ ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಜೀವನದಲ್ಲಿ ಆಸಕ್ತರಾಗಿದ್ದಾರೆ ಎಂಬುದನ್ನು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಮಿ ಅಶೆ ಕಶ್ಯಾಕ್ ಸಾಂಗುಕ್ ಲಾಗ್ಲಾಂವ್ ಮಟ್ಲ್ಯಾರ್, ಉಲ್ಲಿ ತುಮ್ಚ್ಯಾತ್ಲಿ ಲೊಕಾ ಕಾಮ್ ಕರಿನಸ್ತಾನಾ ಆಳ್ಸಿಪಾನಾನ್ ಪಡುನ್ ರ್‍ಹಾತ್ಯಾತ್ ಅನಿ ದುಸ್ರ್ಯಾಂಚ್ಯಾ ಖಬ್ರಿಯಾತ್ನಿ ಜಾವ್ನ್ ಗುಸುನ್ಗೆತ್ ರ್‍ಹಾತ್ಯಾತ್ ಮನುನ್ ಅಮಿ ಆಯಿಕ್ಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:11
5 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.


ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು