Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:12 - ಕನ್ನಡ ಸಮಕಾಲಿಕ ಅನುವಾದ

12 ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥವರು ತಮ್ಮ ಕೆಲಸವನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮಿ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಅಸ್ಲ್ಯಾ ಲೊಕಾಕ್ನಿ ಉಶಾರ್ಕಿ ದಿವ್ನ್ ಹುಕುಮ್ ಕರ್ತಾಂವ್. ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ಲ್ಯಾ ಕಾಮಾಕ್ನಿ ಅನಿ ಅಪ್ಲ್ಯಾ ಜಿವನಾಕ್ ಪಾಜೆ ಹೊಲ್ಲೆ ಅಪ್ನಿಚ್ ರಾಬುನ್ ಕಮ್ವುನ್ ಘೆಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:12
9 ತಿಳಿವುಗಳ ಹೋಲಿಕೆ  

ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ನಮ್ಮ ಅನುದಿನದ ಆಹಾರವನ್ನು ನಮಗೆ ಪ್ರತಿದಿನವೂ ದಯಪಾಲಿಸಿರಿ.


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.


ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.


ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು