Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:8 - ಕನ್ನಡ ಸಮಕಾಲಿಕ ಅನುವಾದ

8 ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟಮಾಡಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮಿ ಕೊನಾಕ್ನಾಬಿ ಕಾಯ್ಬಿ ಪೈಸೆ ದಿ ನಸ್ತಾನಾ ಫುಕೊಟ್ ಜೆವ್ಕ್ ನಾಂವ್; ಅಮಿ ಕಾಮ್ ಕರ್ಲಾಂವ್ ರಾಬ್ನುಕ್ ಕರ್ಲಾಂವ್. ಅಮಿ ತುಮ್ಚ್ಯಾತ್ಲ್ಯಾ ಕೊನಾಚ್ಯಾ ವರ್‍ತಿಬಿ ಎಕ್ ವಜ್ಜೆ ಹೊತಲೆ ನಕ್ಕೊ ಮನುನ್ ಅಮಿ ದಿಸ್ ರಾತ್ ಕಾಮ್ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:8
14 ತಿಳಿವುಗಳ ಹೋಲಿಕೆ  

ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.


ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ಸ್ವಂತ ಕೈಯಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸಿಕೊಂಡು ಆಶೀರ್ವದಿಸುತ್ತೇವೆ, ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ,


ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.


ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.


ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.


ಪ್ರತಿದಿನಕ್ಕೆ ಒಂದು ಎತ್ತು, ಉತ್ತಮವಾದ ಆರು ಕುರಿಗಳು, ಕೋಳಿಗಳು, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವು ನನಗೋಸ್ಕರ ಸಿದ್ಧವಾಗುತ್ತಿದ್ದವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದುದರಿಂದ ನಾನು ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ಬೇಡಲಿಲ್ಲ.


ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ?


ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು.


ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು