Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:1 - ಕನ್ನಡ ಸಮಕಾಲಿಕ ಅನುವಾದ

1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:1
17 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು.


ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.


ಯೆಹೋವ ದೇವರು ಯೋಸೇಫನ ಸಂಗಡ ಇದ್ದುದರಿಂದ, ಅವನು ಏಳಿಗೆಯಾಗಿ ಈಜಿಪ್ಟಿನವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.


ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.


ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ.


ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.


ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.


ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.


“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.


ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಯೆಹೋವ ದೇವರ ಸಿಂಹಾಸನದ ಮೇಲೆ ಕುಳಿತುಕೊಂಡು, ಸಮೃದ್ಧಿ ಹೊಂದಿದನು. ಸಮಸ್ತ ಇಸ್ರಾಯೇಲರು ಅವನಿಗೆ ವಿಧೇಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು