2 ಪೂರ್ವಕಾಲ ವೃತ್ತಾಂತ 1:10 - ಕನ್ನಡ ಸಮಕಾಲಿಕ ಅನುವಾದ10 ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಹೋಗುತ್ತಾ ಬರುತ್ತಾ ಇರುವದಕ್ಕೋಸ್ಕರ ನನಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಬೇಕು ಎಂದು ದೇವರನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ಈ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |