2 ಪೂರ್ವಕಾಲ ವೃತ್ತಾಂತ 1:4 - ಕನ್ನಡ ಸಮಕಾಲಿಕ ಅನುವಾದ4 ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತಾನು ಯೆರೂಸಲೇವಿುನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿಟ್ಟ ಡೇರೆಗೆ ತೆಗೆದುಕೊಂಡು ಬಂದಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು. ಅಧ್ಯಾಯವನ್ನು ನೋಡಿ |