Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೊಲೊಮೋನನು ದೇವದರ್ಶನದ ಗುಡಾರದ ಬಳಿಯಲ್ಲಿ ಯೆಹೋವನ ಮುಂದಿದ್ದ ಆ ತಾಮ್ರವೇದಿಯ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವದರ್ಶನ ಗುಡಾರದ ಮುಂಭಾಗದಲ್ಲಿದ್ದ ತಾಮ್ರದ ಯಜ್ಞವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:6
6 ತಿಳಿವುಗಳ ಹೋಲಿಕೆ  

ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.


ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು.


ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು.


ಆಗ ಅರಸನಾದ ಸೊಲೊಮೋನನೂ, ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.


ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು