2 ಪೂರ್ವಕಾಲ ವೃತ್ತಾಂತ 10:11 - ಕನ್ನಡ ಸಮಕಾಲಿಕ ಅನುವಾದ11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು. ಅಧ್ಯಾಯವನ್ನು ನೋಡಿ |