Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:13 - ಕನ್ನಡ ಸಮಕಾಲಿಕ ಅನುವಾದ

13 ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನು ಅವರಿಗೆ ಕಠಿನವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಅರಸನಾದ ರೆಹಬ್ಬಾಮನು ಹಿರಿಯರ ಸಲಹೆಯನ್ನು ತಿರಸ್ಕರಿಸಿ ಜನರೊಂದಿಗೆ ಬಹಳ ಕೀಳಾಗಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:13
11 ತಿಳಿವುಗಳ ಹೋಲಿಕೆ  

ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,


ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟು ಹೋಗು. ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರ. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ಸಾಯುವೆ,” ಎಂದನು.


ದೇಶದ ಅಧಿಪತಿಯಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ, ದೇಶದ ಗೂಢಚಾರರನ್ನಾಗಿ ನಮ್ಮನ್ನು ಎಣಿಸಿದನು.


ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.


ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ” ಎಂದು ಅರಸನು ಹೇಳಿದ ಪ್ರಕಾರ ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.


ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.


ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು