2 ಪೂರ್ವಕಾಲ ವೃತ್ತಾಂತ 10:18 - ಕನ್ನಡ ಸಮಕಾಲಿಕ ಅನುವಾದ18 ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕರಾದ ಹದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ, ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸ ರೆಹಬ್ಬಾಮನು ಬೇಗನೆ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲ್ಯರ ಬಳಿಗೆ ಕಳುಹಿಸಲು ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇವಿುಗೆ ಓಡಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹದೋರಾಮನು ಬಿಟ್ಟೀಕೆಲಸ ಮಾಡುತ್ತಿದ್ದವರ ಅಧಿಕಾರಿ. ಅವನನ್ನು ರೆಹಬ್ಬಾಮನು ಇಸ್ರೇಲರ ಬಳಿಗೆ ಕಳುಹಿಸಿದನು. ಆದರೆ ಇಸ್ರೇಲರು ಅವನ ಮೇಲೆ ಕಲ್ಲೆಸೆದು ಕೊಂದರು. ಇದನ್ನು ನೋಡಿದ ರೆಹಬ್ಬಾಮನು ಓಡಿಹೋಗಿ ತನ್ನ ರಥವನ್ನು ಏರಿ ಅಲ್ಲಿಂದ ತಪ್ಪಿಸಿಕೊಂಡು ಜೆರುಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿ |