Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:14 - ಕನ್ನಡ ಸಮಕಾಲಿಕ ಅನುವಾದ

14 ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೇವಿಯರು ಯೆಹೋವನಿಗೆ ಯಾಜಕಸೇವೆಮಾಡದಂತೆ ಯಾರೊಬ್ಬಾಮನೂ ಅವನ ಮಕ್ಕಳೂ ಅವರನ್ನು ತಳ್ಳಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:14
10 ತಿಳಿವುಗಳ ಹೋಲಿಕೆ  

ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.


ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.


ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.


ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು