Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:15 - ಕನ್ನಡ ಸಮಕಾಲಿಕ ಅನುವಾದ

15 ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಾವು ಏರ್ಪಡಿಸಿದ ಪೂಜಾಸ್ಥಳ ಅಜದೇವತೆ ಬಸವಮೂರ್ತಿ ಇವುಗಳಿಗೋಸ್ಕರ ಬೇರೆ ಪೂಜಾರಿಗಳನ್ನು ನೇವಿುಸಿಕೊಂಡದ್ದರಿಂದ ಅವರು ಗೋಮಾಳಗಳುಳ್ಳ ತಮ್ಮ ಸ್ವಾಸ್ತ್ಯಗಳನ್ನು ಬಿಟ್ಟು ಯೆಹೂದ ದೇಶಕ್ಕೂ ಯೆರೂಸಲೇವಿುಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:15
16 ತಿಳಿವುಗಳ ಹೋಲಿಕೆ  

ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.


ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.


ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.


ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.


ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.


ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


“ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.


ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು