2 ಪೂರ್ವಕಾಲ ವೃತ್ತಾಂತ 11:16 - ಕನ್ನಡ ಸಮಕಾಲಿಕ ಅನುವಾದ16 ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು. ಅಧ್ಯಾಯವನ್ನು ನೋಡಿ |