2 ಪೂರ್ವಕಾಲ ವೃತ್ತಾಂತ 11:23 - ಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ಅವನು ವಿವೇಕವಾಗಿ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾಮೀನಿನ ದೇಶಗಳಲ್ಲಿ ಇರುವ ಎಲ್ಲಾ ಬಲವಾದ ಪಟ್ಟಣಗಳಲ್ಲಿ ಚದರಿಸಿ, ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಅವರಿಗೆ ಅನೇಕ ಹೆಂಡತಿಯರನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿಟ್ಟು ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು. ಅಧ್ಯಾಯವನ್ನು ನೋಡಿ |