2 ಪೂರ್ವಕಾಲ ವೃತ್ತಾಂತ 12:12 - ಕನ್ನಡ ಸಮಕಾಲಿಕ ಅನುವಾದ12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು. ಅಧ್ಯಾಯವನ್ನು ನೋಡಿ |