2 ಪೂರ್ವಕಾಲ ವೃತ್ತಾಂತ 12:5 - ಕನ್ನಡ ಸಮಕಾಲಿಕ ಅನುವಾದ5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನಿಗೆ ಹೆದರಿ ಯೆರೂಸಲೇವಿುನಲ್ಲಿ ಕೂಡಿದ್ದ ಯೆಹೂದ್ಯಪ್ರಧಾನರ ಬಳಿಗೂ ಬಂದು ಅವರಿಗೆ - ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟು ಬಿಟ್ಟಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.