Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:8 - ಕನ್ನಡ ಸಮಕಾಲಿಕ ಅನುವಾದ

8 ಆದರೂ ಅವರು ನನ್ನ ಸೇವೆಗೂ, ದೇಶಗಳ ಅರಸರ ಸೇವೆಗೂ ಇರುವ ವ್ಯತ್ಯಾಸವನ್ನು ಇವರು ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸ ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕೆಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:8
8 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.


ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.


ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.


ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,


“ಈ ದಿವಸ ನಾವು ಗುಲಾಮರಾಗಿದ್ದೇವೆ. ಅದರ ಫಲವನ್ನೂ, ಅದರ ಉತ್ತಮವಾದದ್ದನ್ನೂ ತಿನ್ನುವುದಕ್ಕೆ ನೀವು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ನಾವು ಗುಲಾಮರಾಗಿದ್ದೇವೆ.


ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:


ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು