Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:10 - ಕನ್ನಡ ಸಮಕಾಲಿಕ ಅನುವಾದ

10 “ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡಿಸುವ ಆರೋನನ ಸಂತಾನದವರಾದ ಯಾಜಕರೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:10
11 ತಿಳಿವುಗಳ ಹೋಲಿಕೆ  

ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.


ಹೀಗೆಯೇ ನಾನು ಅವರನ್ನು ಇತರ ಜನರಿಂದ ಬಿಡಿಸಿ, ಶುದ್ಧಪಡಿಸಿದೆ. ಯಾಜಕರಿಗೂ, ಲೇವಿಯರಿಗೂ, ಅವರವರ ಕೆಲಸದ ಪ್ರಕಾರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು