Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:12 - ಕನ್ನಡ ಸಮಕಾಲಿಕ ಅನುವಾದ

12 ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:12
27 ತಿಳಿವುಗಳ ಹೋಲಿಕೆ  

ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.


ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.


ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು