Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಅಬೀಯನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಅಬೀಯನ ಸೈನ್ಯದವರು ದೊಡ್ಡ ಆರ್ಭಟ ಮಾಡಿದರು. ಆರ್ಭಟಿಸುತ್ತಾ ಮುಂದೆ ಸಾಗಿದರು. ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:15
16 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.


ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.


ಯೆಹೋವ ದೇವರು ಸೀಸೆರನನ್ನೂ, ಅವನ ಎಲ್ಲಾ ರಥಗಳನ್ನೂ, ಅವನ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಖಡ್ಗದಿಂದ ಚದರಿಸಿದರು. ಸೀಸೆರನು ರಥದಿಂದ ಇಳಿದು ಓಡಿಹೋದನು.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.


ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು