Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:2 - ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು. ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:2
11 ತಿಳಿವುಗಳ ಹೋಲಿಕೆ  

ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು.


ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮಾಕಾ, ಇವಳು ಅಬ್ಷಾಲೋಮನ ಮಗಳಾಗಿದ್ದಳು.


ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.


ಆಗ ಒಬ್ಬ ಮುದುಕನು ಹೊಲದಲ್ಲಿ ತನ್ನ ಕೆಲಸಮಾಡಿ ಬರುತ್ತಿದ್ದನು. ಆ ಮನುಷ್ಯನು ಎಫ್ರಾಯೀಮ್ ಬೆಟ್ಟದ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನರ ಊರಾದ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು.


ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾಮೀನನಿಗೆ ಸೇರಿದ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯ ಮುಳುಗಿತ್ತು.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.


ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ, ಅವನು ಯುದ್ಧ ಮಾಡಿದ್ದೂ, ಆಳಿದ್ದೂ, ಇವು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.


ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರ್ಷಗಳಾಗಿದ್ದವು. ಅವನು ಮೃತನಾಗಿ, ತನ್ನ ಪಿತೃಗಳ ಜೊತೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.


ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು