Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:7
20 ತಿಳಿವುಗಳ ಹೋಲಿಕೆ  

ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.


ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


“ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”


ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!


ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.


ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.


ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.


ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ ನಾಡಿನಿಂದ ಹೊರಗೆ ಅಲೆದಾಡುತ್ತಿದ್ದರು.


ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.


ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.


ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ, ಟೋಬ್ ದೇಶದಲ್ಲಿ ವಾಸವಾಗಿದ್ದನು. ಆ ಸ್ಥಳದ ಪುಂಡಪೋಕರಿಗಳು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನನ್ನು ಹಿಂಬಾಲಿಸುತ್ತಿದ್ದರು.


ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು